ಅಕ್ರಮ ಗೋ ಸಾಗಾಟ ತಡೆಯಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ – ಸಂಸದ ನಳಿನ್‍ಕುಮಾರ್ ಕಟೀಲ್ ಸೂಚನೆ

Spread the love

ಅಕ್ರಮ ಗೋ ಸಾಗಾಟ ತಡೆಯಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ – ಸಂಸದ ನಳಿನ್‍ಕುಮಾರ್ ಕಟೀಲ್ ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಹಾಗೂ ಅಕ್ರಮ ಗೋ ಸಾಗಾಟ ತಡೆಯಲು ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು ಬಿಜೆಪಿ ಆಡಳಿತ ಸಹಿಸುವುದಿಲ್ಲ. ಹಿಂಸಾತ್ಮಾಕವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶಂಕಾಸ್ಪದವಾದ ವಾಹನಗಳನ್ನು ತಪಾಸಣೆ ಮಾಡಬೇಕು.ಅಕ್ರಮ ಗೋ ಸಾಗಾಟ ಪ್ರಕರಣದಿಂದ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಯಾಗುವ ಸಾಧ್ಯತೆ ಇದೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಪೆÇಲೀಸರು ಎಚ್ಚರಿಕೆ ವಹಿಸಬೇಕು ಎಂದು ಸಂಸದರು ತಿಳಿಸಿದ್ದಾರೆ.


Spread the love