Home Mangalorean News Kannada News ಅಕ್ರಮ ಜಾನುವಾರು ಸಾಗಣೆ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ

ಅಕ್ರಮ ಜಾನುವಾರು ಸಾಗಣೆ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ

Spread the love

ಅಕ್ರಮ ಜಾನುವಾರು ಸಾಗಣೆ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ

ಉಪ್ಪಿನಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು 16 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಜೂನ್ 17ರಂದು ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಆನೆಬೈಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ-14-ಎ-7511 ಸಂಖ್ಯೆಯ ಈಚರ್ ಲಾರಿಯನ್ನು ಪರಿಶೀಲಿಸಿದರು. ಈ ವೇಳೆ ಲಾರಿಯಲ್ಲಿ 16 ಜಾನುವಾರುಗಳನ್ನು ಸಾಗಿಸಲಾಗುತ್ತಿರುವುದು ಪತ್ತೆಯಾಯಿತು.

ಲಾರಿಯಲ್ಲಿದ್ದ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್ (24) ಹಾಗೂ ಹಾಸನ ಜಿಲ್ಲೆಯ ಹೊಳೆನರಸಿಪುರ ನಿವಾಸಿ ಜಾವೀದ್ ಪಾಷಾ (34) ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಮಾನ್ಯ ದಾಖಲೆಗಳನ್ನು ಹೊಂದಿರದೇ ಅಕ್ರಮವಾಗಿ ಸಾಗಿಸುತ್ತಿರುವುದು ತಿಳಿದುಬಂದಿದೆ.

ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2026ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 5, 6 ಮತ್ತು 12, ಪ್ರಾಣಿ ಹಿಂಸಾ ತಡೆ ಕಾಯ್ದೆಯ ಕಲಂ 11(ಡಿ) ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


Spread the love

Exit mobile version