ಅಕ್ರಮ ಮರಳುಗಾರಿಕೆ ನಿಯಂತ್ರಣಕ್ಕೆ ನಗರ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮ

Spread the love

ಅಕ್ರಮ ಮರಳುಗಾರಿಕೆ ನಿಯಂತ್ರಣಕ್ಕೆ ನಗರ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮ

ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್, ಐಪಿಎಸ್ ಇವರು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಅಧಿಕಾರವಹಿಸಿಕೊಂಡಿದ್ದು, ಕಾನೂನುಬಾಹಿರ ಕೃತ್ಯಗಳ ನಿಯಂತ್ರಣಕ್ಕೆ ವ್ಯಾಪಕ ಕ್ರಮಕೈಗೊಳ್ಳಲಾಗಿರುತ್ತದೆ. ಅಕ್ರಮ ಮರಳುಗಾರಿಕೆ ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ.

ದಿನಾಂಕ 25-02-2023 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್. ಆರ್. ಪಿ.ಎಲ್. ಮೇಲ್ಲೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಲಾರಿಗಳನ್ನು ಪಣಂಬೂರು ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಉಪನಿರ್ಧೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇವರಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿರುತ್ತದೆ.

ದಿನಾಂಕ 26-02-2023 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಲಾರಿಗಳನ್ನು ಪಣಂಬೂರು ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಉಪನಿರ್ಧೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಸ್ತಾಂತರಿಸಲಾಗಿರುತ್ತದೆ.

ದಿನಾಂಕ 28-02-2023 ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂ ಕುದ್ರು ಎಂಬಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಕೆಎ 20 ಚಿ 0876 ಟಿಪ್ಪರ್ ಲಾರಿ ಮತ್ತು ಸುಮಾರು 2 ಯುನಿಟ್ ನಷ್ಟು ಮರಳು ಹಾಗೂ ಕೆಎ 19 ಎಡಿ 9160 ಖಾಲಿ ಟಿಪ್ಪರ್ ಲಾರಿಯನ್ನು ಕಂಕನಾಡಿ ಠಾಣೆಯ ಠಾಣಾಧಿಕಾರಿಯವರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಉಪನಿರ್ಧೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇವರಿಗೆ ಹಸ್ತಾಂತರಿಸಲಾಗಿರುತ್ತದೆ.

ದಿನಾಂಕ 01-03-2023 ರಂದು ಬೆಳಗ್ಗೆ 7-00 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಧಾಳಿ ನಡೆಸಿ ಅಕ್ರಮ ದಾಸ್ತಾನು ಮಾಡಿರುವ ಸುಮಾರು 10 ಲೋಡ್ ಮರಳು ಹಾಗೂ 01 ಹಿಟಾಚಿ ವಾಹನವನ್ನು ಪತ್ತೆ ಮಾಡಿ ಸ್ವಾಧೀನಪಡಿಸಿಕೊಂಡಿರುತ್ತಾರೆ. ಮುಂದಿನ ಕ್ರಮದ ಬಗ್ಗೆ ಸೊತ್ತುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ.


Spread the love