ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳ ವಶ

Spread the love

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳ ವಶ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಾವೂರು ಪೊಲೀಸರು ಗುರುವಾರ ಬೆಳಿಗ್ಗೆ ವಶಪಡಿಸಿಕೊಂಡಿದ್ದಾರೆ.

ಗುರುವಾರದಂದು ಬೊಂದೇಲ್–ಕೆಪಿಟಿ ರಸ್ತೆಯಲ್ಲಿ ಬೆಳಿಗ್ಗೆ ಜಾವ ಬೊಂದೇಲ್ –ಕೆಪಿಟಿ ಕಡೆಗೆ ಹೋಗುವ ರಸ್ತೆಯಲ್ಲಿ 3 ಮರಳು ತುಂಬಿದ ಲಾರಿಯು ನಿಂತಿದ್ದು, ಪರವಾನಿಗೆ ಪರಿಶಿಲನೆಯ ಕುರಿತು ಕಾವೂರು ಠಾಣಾ ಪೊಲೀಸ್ ನಿರೀಕ್ಷಕರು ಲಾರಿಯ ಹತ್ತಿರ ಹೋಗುತ್ತಿದ್ದಂತೆ ಲಾರಿಯಲ್ಲಿದ್ದ ಚಾಲಕರು ಲಾರಿಯಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದು, ಈ ಬಗ್ಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಲಾರಿಯ ಚಾಲಕ ಮತ್ತು ಮಾಲಕರ ವಿರುದ್ದ ಮುಂದಿನ ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಂಗಳೂರು ರವರಿಗೆ ಹಸ್ತಾಂತರಿಸಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ವಿವರಗಳು: 3 ಲಾರಿಗಳು ಮತ್ತು 3 ಲೋಡ್ ಮಗಳು (ಮರಳಿನ ಅಂದಾಜು ಮೌಲ್ಯ ರೂ 90,000/-)

ಈ ಕಾರ್ಯಚರಣೆಯನ್ನು ಮಂಗಳೂರು ಉತ್ತರ ಉಪ ವಿಭಾಗದ ಎ.ಸಿ.ಪಿ ಶ್ರೀನಿವಾಸಗೌಡ ರವರ ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಕೆ. ಆರ್ ನಾಯ್ಕ್ ರವರು ಹಾಗೂ ಸಿಬ್ಬಂದಿಗಳು ಭಾಗವಹಿಸಿರುತ್ತಾರೆ


Spread the love