ಅಕ್ಷರ ಸಂತರ ಶಿಕ್ಷಣ ಪ್ರೀತಿ ಹೋಲಿಕೆಗೆ ನಿಲುಕದ್ದು: ಡಾ.ಕುಮಾರ್

Spread the love

ಅಕ್ಷರ ಸಂತರ ಶಿಕ್ಷಣ ಪ್ರೀತಿ ಹೋಲಿಕೆಗೆ ನಿಲುಕದ್ದು: ಡಾ.ಕುಮಾರ್

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಶೈಕ್ಷಣಿಕ ಪ್ರೀತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆ ಯಾವುದೇ ರೀತಿಯ ಹೋಲಿಕೆಗೆ ನಿಲುಕದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಅವರು ಅಭಿಪ್ರಾಯಪಟ್ಟರು.

ಅವರು ನಗರದ ಜಿಲ್ಲಾ ಪಂಚಾಯತ್‍ನಲ್ಲಿರುವ ಮಿನಿ ಸಭಾಂಗಣದಲ್ಲಿ ಅ.20ರ ಗುರುವಾರ ಹರೆಕಳ ಹಾಜಬ್ಬ ಅವರಿಗೆ ಬೆಂಗಳೂರಿನ ಆರ್.ವಿ. ಶಿಕ್ಷಣ ಸಂಸ್ಥೆ ವತಿಯಿಂದ ನೀಡಲಾದ 5 ಲಕ್ಷ ರೂ.ಗಳ ಚೆಕ್ ವಿತರಿಸಿ ಮಾತನಾಡಿದರು.

ಹರೆಕಳ ಹಾಜಬ್ಬರ ವಿನಂತಿಯಂತೆ ಆರ್.ವಿ. ಶಿಕ್ಷಣ ಸಂಸ್ಥೆಯವರು ಹಾಜಬ್ಬ ಅವರ ಕನಸಿನ ಪಿ.ಯು.ಸಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕಾಗಿ 5 ಲಕ್ಷ ರೂ.ಗಳ ದೇಣಿಗೆಯನ್ನು ನೀಡಿದ್ದಾರೆ, ಇದು ನಿಜಕ್ಕೂ ಕನಸಿಗೆ ನೀರೆರೆಯುವ ಕೆಲಸವಾಗಿದೆ ಎಂದು ಶ್ಲಾಘಿಸಿದರು.

ಪದ್ಮಶ್ರೀ ಪುರಸ್ಕತ ಹರೇಕಳ ಹಾಜಬ್ಬ, ಆರ್.ವಿ. ಶಿಕ್ಷಣ ಸಂಸ್ಥೆಯ ಡಾ.ಸಂತೋμï, ಫೈನಾನ್ಸ್ ಮ್ಯಾನೇಜರ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ಮಂಗಳೂರು ದಕ್ಷಿಣ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಹಾಗೂ ಹರೆಕಳ ಸರ್ಕಾರಿ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಕ್ಷರ ಸಂತರನ್ನು ಸನ್ಮಾನಿಸಿ, ಗೌರವಿಸಲಾಯಿತು.


Spread the love