
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್: ಮಹಿಳಾ ವಿಭಾಗದಲ್ಲಿ ಚಾಂಪಿಯನ್‍ಶಿಪ್
ವಿದ್ಯಾಗಿರಿ: ತಮಿಳುನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆತಿಥ್ಯದಲ್ಲಿ ಚೆನ್ನೈನಲ್ಲಿ ನಡೆದ 82ನೇ ಅಖಿಲ ಭಾರತೀಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಮಹಿಳಾ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಚಾಂಪಿಯನ್‍ಶಿಪ್ ಆಗಿದ್ದು, ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ 32 ವಿದ್ಯಾರ್ಥಿನಿಯರ ಪೈಕಿ 27 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು.ಅಥ್ಲೆಟಿಕ್ಸ್ ಟೂರ್ನಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪುರುಷರ ಹಾಗೂ ಮಹಿಳೆಯರ ತಂಡವನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 7 ಪದಕಗಳನ್ನು ಪಡೆದಿದ್ದಾರೆ.
ಆಳ್ವಾಸ್ ಕಾಲೇಜಿನ ಪೂನಂ ದಿನಕರ್ ಸೋನುನೆ 10,000 ಮೀಟರ್ಸ್ ಮತ್ತು 5,000 ಮೀಟರ್ಸ್ ಓಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸ್ನೇಹಲತಾ ಯಾದವ್ ಮಹಿಳೆಯರ 1,500 ಮೀಟರ್ಸ್ ಓಟದಲ್ಲಿ ಬೆಳ್ಳಿಯ ಪದಕ, ಸ್ನೇಹ ಎಸ್‍ಎಸ್ ಮಹಿಳೆಯರ 100 ಮೀಟರ್ಸ್ ಓಟದಲ್ಲಿ ಬೆಳ್ಳಿಯ ಪದಕ, ಸಚಿನ್ ಯಾದವ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿಯ ಪದಕ ಹಾಗೂ ಪಲ್ಲವಿ ಪಾಟೀಲ್ ಮಹಿಳೆಯರ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಮಾಂತೇಶ್ ಪುರುಷರ 400 ಮೀಟರ್ಸ್ ಓಟದಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.