ಅಗಸ್ಟ್ 1 ರಂದು ಉಡುಪಿ- ದಕ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Spread the love

ಅಗಸ್ಟ್ 1 ರಂದು ಉಡುಪಿ- ದಕ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗಸ್ಟ್ 1 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಗೆ ಭೇಟಿ ನೀಡಿ ಉಭಯ ಜಿಲ್ಲೆಗಳಲ್ಲಿ ಅಧಿಕಾರಿಗಳ ಜೊತೆ ಮಳೆ ಹಾನಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ಉಡುಪಿಗೆ ಆಗಮಿಸಿ 12.30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಸಭೆ ಬಳಿ ಮಂಗಳೂರಿಗೆ ವಾಪಾಸಾಗುವು ಮುಖ್ಯಮಂತ್ರಿ ಸಂಜೆ 4.15ಕ್ಕೆ ಮಂಗಳೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ರಾತ್ರಿ 9.20 ಕ್ಕೆ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love