ಅಗೋಸ್ತ್ 15ರಂದು ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Spread the love

ಅಗೋಸ್ತ್ 15ರಂದು ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಉಡುಪಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ 42 ನೇ ವರ್ಷದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅಗೋಸ್ತ್ 15 ರಂದು ಮಧ್ಯಾಹ್ನ 2 ಗಂಟೆಯಿಂದು ಶ್ರೀನಿವಾಸ ಕಲ್ಯಾಣ ಮಂಟಪ ಎಲ್.ವಿ.ಟಿ. ಪುತ್ತೂರು ಉಡುಪಿ ಇಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ನೇರವೇರಿಸಲಿದ್ದು, ಜಿಲ್ಲೆಯ ಕಾಂಗ್ರೆಸ್ ಶಾಸಕರು, ಹಾಗೂ ಇತರರ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love