ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ – ಕೋಟ ಶ್ರೀನಿವಾಸ ಪೂಜಾರಿ

Spread the love

ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ – ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಅವರು ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ ಅಗ್ನಿ ಪಥಕ್ಕೆ ಅಗ್ನಿ ಕೊಡುವವರು ಗಲಾಟೆ ಆರಂಭಿಸಿದ್ದು, ದೇಶದಲ್ಲಿ ಅಗ್ನಿ ವೀರರು ಕೂಡ ಸೃಷ್ಟಿಯಾಗುತ್ತಿದ್ದಾರೆ. ಅಗ್ನಿಪಥ ಯೋಜನೆಯಲ್ಲಿ ನಾಲ್ಕು ವರ್ಷಗಳ ತರಬೇತಿ ನೀಡಲಾಗುತ್ತಿದ್ದು, ಅಗ್ನಿ ವೀರರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿ ನೀಡುವ ಮೂಲಕ ದೈಹಿಕ ಶಿಕ್ಷಕ ಹುದ್ದೆ ನೀಡಲು ಚಿಂತನೆ ಮಾಡಲಾಗಿದ್ದು ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಸರ್ಕಾರಕ್ಕೆ ಟಿಪ್ಪಣಿ ಕೊಟ್ಟಿದ್ದೇನೆ ಎಂದರು.

ಶೇಕಡ 75ರಷ್ಟು ಅಗ್ನಿವೀರರಿಗೆ ಇಲಾಖೆಯಲ್ಲಿ ಹುದ್ದೆಗಳನ್ನು ಮೀಸಲಿಡುವ ಯೋಚನೆ ಇದ್ದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಮೀಸಲಾತಿಗೆ ಚಿಂತನೆ ನಡೆಸಲಾಗಿದೆ. ಅಲ್ಲದೆ ಇತರ ಹುದ್ದೆಗಳಲ್ಲೂ ಆದ್ಯತೆ ನೀಡುವ ಚಿಂತನೆ ಇದ್ದು, ಕಡತವನ್ನು ಮಂಡಿಸಲು ಈಗಾಗಲೇ ಟಿಪ್ಪಣಿ ಕೊಡಲಾಗಿದೆ
ಸುಶಿಕ್ಷಿತ ಅಗ್ನಿ ವೀರರಿಗೆ ಸೂಕ್ತ ಹುದ್ದೆ ನೀಡಲು ಚಿಂತಿಸಲಾಗಿದ್ದು, ವಾರ್ಡನ್ ಹುದ್ದೆಯಲ್ಲೂ ಅಗ್ನಿ ವೀರರಿಗೆ ಅವಕಾಶ ನೀಡಲು ಯೋಜಿಸಲಾಗಿದೆ. ಅಗ್ನಿ ವೀರರನ್ನು ನೇಮಿಸಿಕೊಳ್ಳಲು ನಮಗೆ ಹೆಮ್ಮೆ ಇದೆ ಖಂಡಿತ ಹುದ್ದೆ ಮೀಸಲು ಇರುತ್ತೇವೆ ಎಂದರು.

ಅಗ್ನಿಪಥ್ ಯೋಜನೆಗೆ ಪೂರಕವಾಗಿ ಸೇನಾ ಸೇರ್ಪಡೆಗೆ ಪೂರ್ವ ತರಬೇತಿ ಕೇಂದ್ರಗಳ ಸ್ಥಾಪನೆಗೆ ಚಿಂತಿಸಲಾಗಿದ್ದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕೇಂದ್ರ ಸ್ಥಾಪನೆ ಮಾಡಲಾಗುವುದು. ರಾಣಿ ಅಬ್ಬಕ್ಕ ,ಕೋಟಿ-ಚೆನ್ನಯ್ಯ, ಹೆಂಜ ನಾಯ್ಕರ ಹೆಸರಲ್ಲಿ ಕೇಂದ್ರ ಸ್ಥಾಪನೆ ಯಾಗಲಿದ್ದು, ಈ ಕೇಂದ್ರಗಳ ಸ್ಥಾಪನೆಗೆ ಈಗಲೇ ಆದೇಶ ಮಾಡಲಾಗಿದೆ ಮತ್ತು ತಿಂಗಳೊಳಗೆ ಕೇಂದ್ರದ ಚಟುವಟಿಕೆಗಳ ಪ್ರಾರಂಭವಾಗಲಿದೆ ಎಂದರು.


Spread the love