ಅಜೆಕಾರು : ಕಾರು – ಬೈಕ್ ಡಿಕ್ಕಿ – ಸವಾರ ಸಾವು

Spread the love

ಅಜೆಕಾರು : ಕಾರು – ಬೈಕ್ ಡಿಕ್ಕಿ – ಸವಾರ ಸಾವು

ಅಜೆಕಾರು : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಮರ್ಣೆ ಎಂಬಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಮಂಜುನಾಥ ಶೆಟ್ಟಿ (32) ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಕಾರು ಚಾಲಕ ಅತಿಯಾದ ವೇಗದಿಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಮಂಜುನಾಥ್ ಶೆಟ್ಟಿಯನ್ನು ಆಸ್ಪತ್ರೆಗೆ ರವಾನಿಸಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love