ಅಜೆಕಾರು: ನಾಯಿಗೆ ವಿಷ ಉಣಿಸಿದ ಘಟನೆ- ಆರೋಪಿಗಳ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ!
ಕಾರ್ಕಳ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಮರ್ಣೆಯಲ್ಲಿ ನಾಯಿಗೆ ವಿಷ ಹಾಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಪೆಟಾ ಸಂಸ್ಥೆ 50 ಸಾವಿರ ರೂ. ಬಹುಮಾನ ಘೋಷಣೆ ಮಾಡಿದೆ.
ಜೂನ್ 6ರಂದು ವಿಷ್ಣುಮೂರ್ತಿ ದೇವಸ್ಥಾನ ಪರಿಸರದಲ್ಲಿ ನಾಯಿ ಮೃತಪಟ್ಟ ಸ್ಥಿತಿಯಲ್ಲಿದ್ದು, ಮರುಣೋತ್ತರ ಪರೀಕ್ಷೆಯಲ್ಲಿ ನಾಯಿಗೆ ವಿಷ ಉಣಿಸಿರುವುದು ದೃಢಪಟ್ಟಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಪೆಟಾ ಸಂಸ್ಥೆಯು ನಾಯಿಗೆ ವಿಷ ಉಣಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಲ್ಲಿ 50 ಸಾವಿರ ರೂ. ಬಹುಮಾನ ಘೋಷಿಸಿದೆ. ಈ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತನ್ನ ಪ್ರಕಟನೆಯಲ್ಲಿ ತಿಳಿಸಿದೆ.