ಅಟೋ ರಿಕ್ಷಾ ಚಾಲನೆಯ ವೇಳೆ ಹೃದಯಾಘಾತದಿಂದ ಮೃತಪಟ್ಟ ಚಾಲಕ

Spread the love

ಅಟೋ ರಿಕ್ಷಾ ಚಾಲನೆಯ ವೇಳೆ ಹೃದಯಾಘಾತದಿಂದ ಮೃತಪಟ್ಟ ಚಾಲಕ

ಮಂಗಳೂರು: ಆಟೋ ರಿಕ್ಷಾವೊಂದರ ಚಾಲಕ ಚಾಲನೆ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.

ಮೃತರನ್ನು ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ.

ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲು ವ್ಯಾಪಾರಿಯೋರ್ವರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದರು ಆಟೋ ರಿಕ್ಷಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಚಾಲಕ ಹನೀಫ್ ರಿಗೆ ಕಣ್ಣು ಮಂಜದಂತಾಗಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರು ಹನೀಫ್ ರನ್ನು ಆರೈಕೆ ಮಾಡಿದ್ದರು. ಬಳಿಕ ಸಾವರಿಸಿಕೊಂಡ ಅವರು ರಿಕ್ಷಾ ಚಲಾಯಿಸಿಕೊಂಡು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದರೂ ನೇತ್ರಾವತಿ ಸೇತುವೆ ತಲುಪಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.‌

ಈ‌ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.


Spread the love