ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್ ಎಂದ  ಸಿಎಂ ಬೊಮ್ಮಾಯಿ

Spread the love

ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್ ಎಂದ  ಸಿಎಂ ಬೊಮ್ಮಾಯಿ

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಕವಚನದಲ್ಲೇ   ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.

ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಧರಣಿ ನಡೆಸುತ್ತಿರುವುದು ರಾಜಕೀಯ ಪ್ರೇರಿತ. ನಾವೂ ಅದನ್ನು ರಾಜಕೀಯ ಪ್ರೇರಿತ ಮಾಡುವುದು ಬೇಡ. ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ನೀರು ಪೂರೈಸುವುದಕ್ಕೆ ಸಂಗ್ರಹಿಸಲಾಗುತ್ತಿದೆ. ಗೊತ್ತಿದ್ದೂ ಪ್ರತಿಭಟನೆ ಮಾಡಿದ್ರೆ ಅದು ರಾಜಕೀಯ ಪ್ರೇರಿತ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಹಿಂದೆಯೂ ಈ ಕುರಿತು ಸಿಎಂ ಬೊಮ್ಮಾಯಿ ತಮ್ಮ ನಿಲುವನ್ನು ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದರು. ಅಣ್ಣಾಮಲೈ ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ನಿಲುವನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.


Spread the love