ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ

Spread the love

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ

ಮಂಗಳೂರು : ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಡಿಸೆಂಬರ್ 12 ರಂದು ಬಹರೇನ್‍ನ ಕನ್ನಡ ಸಂಘವು ಹಮ್ಮಿಕೊಳ್ಳಲಾದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಿದ್ದರು.

ಈ ಸಂಧರ್ಭದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ರೂಪಿಸಿ ಜಾರಿಗೆ ತಂದಿರುವ ಅನಿವಾಸಿ ಭಾರತೀಯ/ಕನ್ನಡಿಗರ ನೀತಿಯ ಕುರಿತು ಅವರು ಮಾಹಿತಿ ನೀಡಿದರು. ಭಾರತೀಯ ರಾಯಭಾರಿ ಕಛೇರಿಯ ಕಾರ್ಯದರ್ಶಿಗಳಾದ ಆನಂದ್ ಪ್ರಕಾಶ್ ಯಾವುದೇ ರೀತಿಯ ಸಮಸ್ಯೆಗಳಿದ್ದರೆ ತನ್ನನ್ನು ನೇರವಾಗಿ ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಸಭೆಗೆ ತಿಳಿಸಿದರು.

ಬಹರೇನ್‍ನ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ, ಇಫ್ತಿಕಾರ್, ಮಹಮ್ಮದ್ ಮನ್ಸೂರ್, ಅಬ್ದುಲ್ ಸತ್ತಾರ್ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹರೇನ್‍ನ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ ಕಳೆದ 40 ವರ್ಷಗಳಿಂದ ಈ ಸಂಘ ಅಸ್ತಿತ್ವದಲ್ಲಿದ್ದು , ಸಂಘಕ್ಕೆ ಒಂದು ಹೊಸ ಕನ್ನಡ ಭವನವನ್ನ ನಿರ್ಮಿಸಲು ರಾಜ್ಯ ಸರ್ಕಾರದಿಂದ ಅನುಧಾನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸ್ಪಂದಿಸಿದ ಡಾ. ಆರತಿ ಕೃಷ್ಣ, ಬೇಡಿಕೆಯನ್ನು ರಾಜ್ಯ ಸರ್ಕಾರದಿಂದ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.


Spread the love