ಅನುಚಿತ ವರ್ತನೆ ಪ್ರಕರಣ: ಮತ್ತೆ ಮೂವರು ವಿದ್ಯಾರ್ಥಿಗಳು ವಶಕ್ಕೆ

Spread the love

ಅನುಚಿತ ವರ್ತನೆ ಪ್ರಕರಣ: ಮತ್ತೆ ಮೂವರು ವಿದ್ಯಾರ್ಥಿಗಳು ವಶಕ್ಕೆ
 

ಮಂಗಳೂರು: ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್(ಪಿಜಿ)ನಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿಗಳ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿದ್ದಲ್ಲದೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಈ ಕೃತ್ಯದಲ್ಲಿ ಹಲವರು ಭಾಗಿಯಾಗಿದ್ದು, 3 ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಮಂದಿಯನ್ನು ವಶಕ್ಕೆ ಪಡೆದಂತಾಗಿದೆ.

ಪ್ರಕರಣ ಮಹಿಳಾ ಠಾಣೆಯಿಂದ ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ವರ್ಗಾವಣೆಯಾಗಿದ್ದು, ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here