ಅನ್ ಲಾಕ್‌ 4.0: ಪದವಿ ಕಾಲೇಜು, ಚಿತ್ರಮಂದಿರ ಪುನರಾರಂಭಕ್ಕೆ ರಾಜ್ಯ ಸರ್ಕಾರ ತೀರ್ಮಾನ

Spread the love

ಅನ್ ಲಾಕ್‌ 4.0: ಪದವಿ ಕಾಲೇಜು, ಚಿತ್ರಮಂದಿರ ಪುನರಾರಂಭಕ್ಕೆ ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಇದೇ 26ರಿಂದ ಪದವಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕನಿಷ್ಠ ಡ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ.


Spread the love