ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ: ಇಬ್ಬರ ಬಂಧನ

Spread the love

ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ: ಇಬ್ಬರ ಬಂಧನ

ಉಡುಪಿ: ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಹಾಗೂ ಇತರ ವಸ್ತುಗಳನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತಮಿಳುನಾಡಿನ ತಿರುಪತ್ತೂರು ನಿವಾಸಿ ಬಾಲನ್ (34) ಮತ್ತು ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಕಾರ್ತಿಕ್ (28) ಎಂದು ಗುರುತಿಸಲಾಗಿದೆ.

ಆಗಸ್ಟ್ 31 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ವಿದ್ಯಾರತ್ನ ನಗರದಲ್ಲಿ ಇರುವ ಪ್ರಿನ್ಸೆಸ್ ಕೀರ್ತಿ ಅಪಾರ್ಟಮೆಂಟನ್ ನಲ್ಲಿ ವಾಸವಿರುವ ಆಕಾಶ್ ಸಿ ಸೂರ್ಯ ವಂಶಿ ಎಂಬವರ ರೂಮಿನಲ್ಲಿ ಸುಮಾರು 400000/- ರೂ ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು 01 ಆಪಲ್ ಕಂಪನಿಯ ಒಂದು ಐಪಾಡ್ ಕಳತನವಾಗಿದ್ದು, ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ಮಣಿಪಾಲ ಪಿ,ಐ ಟಿ,ವಿ ದೇವರಾಜ್ ನೇತ್ರತ್ವದಲ್ಲಿ ಪಿ,ಎಸ್,ಐ ರಾಘವೇಂದ್ರ, ಪಿ,ಎಸ್,ಐ ಅಕ್ಷಯ ಕುಮಾರಿ, ಎ,ಎಸ್,ಐ ವಿವೇಕಾನಂದ , ಹೆಚ್,ಸಿ, ಇಮ್ರಾನ್, ಹೆಚ್,ಸಿ ಸುಕುಮಾರ್ ಶೆಟ್ಟಿ ಹಾಗೂ ಪಿ,ಸಿ ರಘು ನೇತ್ರತ್ವದ ತಂಡವನ್ನು ರಚಿಸಲಾಗಿತ್ತು. ಈ ತಂಡವು ಸಪ್ಟೆಂಬರ್ 2 ರಂದು ಕಳ್ಳತನ ಪ್ರಕರಣದ ಆರೋಪಿಗಳಾದ ಪಿ ಕಾರ್ತೀಕ್ ಮತ್ತು ಬಾಲನ್ ಗೋವಿಥಾನ್ ಇವರನ್ನು ಉಡುಪಿ ಜಿಲ್ಲೆಯ ಕಟಪಾಡಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡು, ಆರೋಪಿಗಳಿಂದ ಸುಮಾರು 400000/- ರೂ ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು 01 ಆಪಲ್ ಕಂಪನಿಯ ಒಂದು ಐಪಾಡ್ ನ್ನು ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಮಣಿಪಾಲ ನಗರದಲ್ಲಿ ಅನೇಕ ಅಪಾರ್ಟಮೆಂಟ್ ಗಳು ಇದ್ದು, ಬಹುತೇಕ ವಿದ್ಯಾರ್ಥಿಗಳು ಅಪಾರ್ಟಮೆಂಟ್ ನಲ್ಲಿ ವಾಸವಿದ್ದು, ವಿದ್ಯಾರ್ಥಿಗಳು ಅವರು ಬಳಸುವ ಬೆಲೆಬಾಳುವ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್ ಟಾಪ್, ಮೊಬೈಲ್, ಐಪಾಡ್ ಗಳನ್ನು ರೂಮ್ ನಲ್ಲಿ ಇಟ್ಟು ಬಾಗಿಲು ಹಾಕದೇ ನಿರ್ಲಕ್ಷವಹಿಸುತ್ತಿದ್ದು ಆರೋಪಿಗಳು ಇದನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗರೂಕತೆಯಿಂದ ಇರಬೇಕೆಂದು ತಿಳಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments