ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ

Spread the love

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಟ್ಲ ಕನ್ಯಾನ ಗ್ರಾಮದ ಸುರೇಶ್ ಪ್ರಭು (31) ಎಂದು ಗುರುತಿಸಲಾಗಿದೆ.

ಫೆಬ್ರವರಿ 1ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ 9ನೇ ತರಗತಿಯಲ್ಲಿ ಕಲಿಯುತ್ತಿರುವ ಈ ಪ್ರಕರಣದ ಸಂತ್ರಸ್ಥ ಬಾಲಕನು ತರಗತಿಯನ್ನು ಮುಗಿಸಿ ಕಾಲೇಜಿನ ಮುಂಭಾಗ ನಡೆದುಕೊಂಡು ಮನೆಗೆ ಬರುವಾಗ ಆರೋಪಿ ಸುರೇಶ್ ಪ್ರಭು ಬಾಲಕನ ಬಳಿ ಮಾತನಾಡಲು ಇದೆ ಎಂದು ಶಾಲೆಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವುದ್ದು, ಈ ಬಗ್ಗೆ ಬಾಲಕನ ತಾಯಿ ನೀಡಿದ ದೂರಿನಂತೆ ವಿಟ್ಲ ಪೊಲೀಸರು ಆರೋಪಿಯ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.


Spread the love