Home Mangalorean News Kannada News ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ

Spread the love

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿ, ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಆಕೆ ಗರ್ಭಿಣಿಯಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ತಾಯಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ ಬಳಿಕ ಮಂಗಳೂರಿನ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.


Spread the love

Exit mobile version