ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟ ಆರೋಪಿಗಳ ಅಪರಾಧ ಪಟ್ಟಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

Spread the love

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟ ಆರೋಪಿಗಳ ಅಪರಾಧ ಪಟ್ಟಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳ ಅಪರಾಧ ಪಟ್ಟಿಯನ್ನು ಪೊಲೀಸ್ ಇಲಾಖೆ  ಬಿಡುಗಡೆಗೊಳಿಸಿದೆ.

ಆರೋಪಿಗಳಾದ ಭರತ್ ಕುಮ್ಡೇಲು, ಅಭಿನ್ ರೈ, ಪ್ರದೀಪ್, ಶಿವಪ್ರಸಾದ್, ರಂಜಿತ್, ತೇಜಾಕ್ಷ ವಿರುದ್ಧ ಈವರೆಗೆ ದಾಖಲಾದ ಅಪರಾಧಗಳ ಪಟ್ಟಿಯನ್ನು ಬಿಡುಗಡೆಗೊಳಿಸಿರುವ ಪೊಲೀಸ್ ಇಲಾಖೆಯು, ಈ ಪ್ರಕರಣಗಳೆಲ್ಲವೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದೆ.

ಭರತ್ ಕುಮ್ಡೇಲು ವಿರುದ್ಧ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದೊಂದು ಕೊಲೆ, ಬಂಟ್ವಾಳ ನಗರ ಠಾಣೆಯಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ, ಉಪ್ಪಿನಂಗಡಿ ಠಾಣೆಯಲ್ಲಿ ದಲಿತ ದೌರ್ಜನ್ಯ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣವಿದೆ.

ಅಭಿನ್ ರೈ ವಿರುದ್ಧ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದೊಂದು ಕೊಲೆ ಪ್ರಕರಣ ದಾಖಲಾಗಿದೆ. ಪ್ರದೀಪ್ ವಿರುದ್ಧ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದೊಂದು ಕೊಲೆ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದು ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಶಿವಪ್ರಸಾದ್ ಮತ್ತು ರಂಜಿತ್ ವಿರುದ್ಧ ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದೊಂದು ಕೊಲೆ ಪ್ರಕರಣ ದಾಖಲಾಗಿದೆ. ತೇಜಾಕ್ಷ ವಿರುದ್ಧ ಬಜ್ಪೆ ಠಾಣೆಯಲ್ಲಿ ಮಾದಕ ದ್ರವ್ಯ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ, ಕೊಲೆ ಮತ್ತು ಕೊಲೆಯತ್ನ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments