ಅಮಾನತ್ತಾಗಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ನಂದೀಶ್ ತೀವ್ರ ಹೃದಯಾಘಾತದಿಂದ ಸಾವು

Spread the love

ಅಮಾನತ್ತಾಗಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ನಂದೀಶ್ ತೀವ್ರ ಹೃದಯಾಘಾತದಿಂದ ಸಾವು

ಬೆಂಗಳೂರು: ಅಮಾನತುಗೊಂಡಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ನಂದೀಶ್‌ ಮೂಲತಃ ಮೈಸೂರಿನ ಹುಣಸೂರು ಮೂಲದವರು. ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಅದಾದ ನಂತರ ಆನೇಕಲ್‌ನಲ್ಲಿ ಇನ್ಸ್‌ಪೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದಾಗ ಅವಧಿ ಮೀರಿ ಪಬ್‌ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಸಸ್ಪೆಂಡ್‌ ಆಗಿದ್ದರು.

ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್‌ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


Spread the love