ಅಮಾಸೆಬೈಲು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು

Spread the love

ಅಮಾಸೆಬೈಲು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು

ಉಡುಪಿ: ಅಪ್ರಾಪ್ತ ಬಾಲಕಿಯನ್ನ  ರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲಿನಲ್ಲಿ ನಡೆದಿದೆ.

ಶ್ರೇಯಸ್ ನಾಯ್ಕ್(25) ತಲೆಮರೆಸಿಕೊಂಡಿರುವ ಆರೋಪಿ.

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಹಾಲಾಡಿಯ ನಿರ್ಜನ ಪ್ರದೇಶಕ್ಕೆ  ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನಂದು ಆರೋಪಿಸಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ.ಸದ್ಯ ಪ್ರಕರಣ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ ಅವರು ಮೇ18 ರಂದು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರ ಮುಂದೆ ಸಂತ್ರಸ್ತರ ಹೇಳಿಕೆಯಂತೆ ಇಬ್ಬರೂ ಒಂದೇ ಮರಾಠ ನಾಯಕ (ಎಸ್ಟಿ) ಸಮುದಾಯದವರಾಗಿದ್ದು, ಸ್ವಲ್ಪ ಸಮಯದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ಆರೋಪಿ ತಲೆಮರೆಸಿಕೊಂಡಿದ್ದಾನೆ.

ಕೆಲವೊಂದು ಮಾಧ್ಯಮಗಳಲ್ಲಿ ಲೈಂಗಿಕ ಕಿರುಕುಳ ನೀಡಿ ಅದರ ವೀಡಿಯೋ ರೆಕಾರ್ಡಿಂಗ್ ಮಾಡಿಕೊಳ್ಳಲಾಗಿದೆ ಎಂದು ಪ್ರಸಾರವಾಗಿದ್ದು ಸುಲಿಗೆ ಅಥವಾ ವೀಡಿಯೊ ರೆಕಾರ್ಡಿಂಗ್ಗೆ ಸಂಬಂಧಿಸಿದಂತೆ ಈಗಿನಂತೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ. ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ ಸಂತ್ರಸ್ತೆ ಕೂಡ ವಿಡಿಯೋ ರೆಕಾರ್ಡಿಂಗ್ ಅಥವಾ ಸುಲಿಗೆ ಬಗ್ಗೆ ಏನನ್ನೂ ಹೇಳಿಲ್ಲ. ಅವರ ಲ್ಯಾಪ್ಟಾಪ್ ಕೂಡ ವಶಪಡಿಸಿಕೊಳ್ಳಲಾಗಿದೆ. ನಾವು ಅದನ್ನು ಹೊರತೆಗೆಯಲು ಕಳುಹಿಸುತ್ತೇವೆ. ವೀಡಿಯೊಗಳು ಮತ್ತು ಸುಲಿಗೆಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನೀಡುವಂತೆ ಸಂಬಂಧಪಟ್ಟ ಮಾಧ್ಯಮ ಸಿಬ್ಬಂದಿಗೆ ನೋಟಿಸ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love

Leave a Reply