ಅಮಾಸೆಬೈಲು: ಕಂಟೈನರ್ ಲಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ

Spread the love

ಅಮಾಸೆಬೈಲು: ಕಂಟೈನರ್ ಲಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ

ಕುಂದಾಪುರ: ಕಂಟೈನರ್ ಲಾರಿಯಲ್ಲಿ ಹಾವೇರಿಯಿಂದ ಮಂಗಳೂರಿಗೆ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಅಮಾಸೆಬೈಲು ಪೊಲೀಸ್ ಠಾಣಾ ಪಿಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಶನಿವಾರ ಮುಂಜಾನೆ ಬಂಧಿಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಬಂಧಿತರನ್ನು ದಾವಣಗೆರೆ ಹರಿಹರ ತಾಲೂಕು ನಿವಾಸಿ ಮೆಹಬೂಬ್ (27), ಹಾನಗಲ್ ತಾಲೂಕು ನಿವಾಸಿ ಅಲ್ಲಾ ಭಕ್ಷಿ (33) ಎಂದು ಗುರುತಿಸಲಾಗಿದೆ. ಅಲ್ಲದೆ ಮಂಗಳೂರು ನಿವಾಸಿಗಳಾದ ಜಾನುವಾರಗಳ ಮ್ಹಾಲಕ ಹನೀಫ್ ಮತ್ತು ಕಂಟೈನರ್ ಮ್ಹಾಲಕ ಜಾಫರ್ ಸಾಧಿಕ್ ಮೇಲೆ ಕೂಡ ಪ್ರಕರಣ ದಾಖಲಿಸಲಾಗಿದೆ.

ಜುಲೈ 25 ಶನಿವಾರ ಬೆಳಿಗ್ಗೆ 5 ಗಂಟೆಗೆ ಕುಂದಾಪುರ ತಾಲೂಕಿನ ಹೊಸಂಗಡಿ ಚೆಕ್ ಪೊಸ್ಟ್ ಬಳಿ ಅನಿಲ್ ಕುಮಾರ್ ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಬರುತ್ತಿದ್ದ ಕಂಟೈನರ್ ವಾಹನವನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದ ವೇಳೆ ವಾಹನದಲ್ಲಿ ಕೋಣಗಳು – 3, ಎಮ್ಮೆಗಳು – 13 ಮತ್ತು ಹೋರಿ- 1 ಒಟ್ಟು 17 ಜಾನುವಾರುಗಳನ್ನು ಯಾವುದೇ ಮೇವು, ಆಹಾರ ನೀಡದೆ ಒಂದಕ್ಕೊಂದು ತಾಗಿಕೊಂಡು ಹಿಂಸ್ಮಾತಕವಾಗಿ ತುಂಬಿಸಿ ಕಟ್ಟಿ ಹಾಕಿರುವುದು ಕಂಡು ಬಂದಿದೆ.

ಜಾನುವಾರುಗಳನ್ನು ಮಾಂಸಕ್ಕಾಗಿ ಹಾವೇರಿಯಿಂದ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿದ್ದು, ಜಾನುವಾರುಗಳನ್ನು ಸಾಗಾಟ ಮಾಡುವ ಬಗ್ಗೆ ಯಾವುದೇ ಪರವಾನಿಗೆಯನ್ನು ಹೊಂದಿರುವುದಿಲ್ಲ 17 , ಜಾನುವಾರು ಹಾಗೂ ಕಂಟೈನರ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


Spread the love