ಅಯೋಧ್ಯೆ ತೀರ್ಪು: ನ.9ರಂದು ದ.ಕ. ಜಿಲ್ಲಾ ಶಾಲಾ-ಕಾಲೇಜಿಗೆ ರಜೆ, ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿ ಮನವಿ 

ಅಯೋಧ್ಯೆ ತೀರ್ಪು: ನ.9ರಂದು ದ.ಕ. ಜಿಲ್ಲಾ ಶಾಲಾ-ಕಾಲೇಜಿಗೆ ರಜೆ, ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿ ಮನವಿ 

ಮಂಗಳೂರು : ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ನ.9ರಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ.9ರಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದ್ದು,, ತೀರ್ಪಿನ ವಿಚಾರದಲ್ಲಿ ಜಿಲ್ಲೆಯ ಜನರು ಉದ್ವೇಗಕ್ಕೋಳಗಾಗದೇ ಶಾಂತಿ ಸೌಹಾರ್ದತೆಯನ್ನು ಕಾಪಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸೂಚನೆ ನೀಡಿದ್ದಾರೆ.

Leave a Reply

  Subscribe  
Notify of