ಅರಸು ಅವರ ಯೋಜನೆಗಳ ಪ್ರಯೋಜನ ಪಡೆಯಿರಿ- ಮೀನಾಕ್ಷಿ ಮಾಧವ

Spread the love

ಅರಸು ಅವರ ಯೋಜನೆಗಳ ಪ್ರಯೋಜನ ಪಡೆಯಿರಿ- ಮೀನಾಕ್ಷಿ ಮಾಧವ

ಉಡುಪಿ : ಸಾಮಾಜಿಕ ಸುಧಾರಣೆಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಾರಿಗೆ ತಂದ ಸುಧಾರಣೆಗಳು ಮತ್ತು ಯೋಜನೆಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತಾಗಲಿ ಎಂದು ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಹೇಳಿದ್ದಾರೆ.
ಅವರು ಸೋಮವಾರ ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ನಡೆದ ಅರಸು ಜನ್ಮ ಶನಮಾನೋತ್ಸವ ಪ್ರಯುಕ್ತ ಅವರ ಸಾಧನೆಗಳನ್ನು ಬಿಂಬಿಸುವ ರಥಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

devraj-arasu

ಸಮಾಜದ ಎಲ್ಲಾ ವರ್ಗಗಳ ಜನರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದ ಅರಸು ಅವರು, ಮಲ ಹೊರುವ ಅನಿಷ್ಠ ಪದ್ದತಿಯನ್ನು ನಿಷೇಧ ಮಾಡಿದರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಅವರು ಜಾರಿಗೆ ತಂದ ಹಲವು ಯೋಜನೆಗಳ ಪ್ರಯೋಜನ ಎಲ್ಲರೂ ಪಡಯಬೇಕು ಎಂದು ಹೇಳಿದರು.

ನಗರಸಭೆಯ ಉಪಾಧ್ಯಕ್ಷೆ ಸಂಧ್ಯಾ, ತಾಲೂಕು ಪಂಚಾಯತ್ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಎಸ್ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಹರೀಶ್ ಗಾಂವಕರ್ ಸ್ವಾಗತಿಸಿದರು, ವಿಸ್ತರಣಾಧಿಕಾರಿ ದಯಾನಂದ್ ನಿರೂಪಿಸಿ, ವಂದಿಸಿದರು.

ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಸಾಧನೆಗಳನ್ನು ಬಿಂಬಿಸುವ ರಥಯಾತ್ರೆಯು , ಉಡುಪಿ, ಕಾರವಾರ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಿಂದ ಹೊರಟಿದ್ದು, ಈ ರಥಯಾತ್ರೆಗಳು ರಾಜ್ಯಾಧ್ಯಂತ ಸಂಚರಿಸಿ ಆಗಸ್ಟ್ 20 ರಂದು ಬೆಂಗಳೂರಿನಲ್ಲಿ ನಡೆಯುವ ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿವೆ.


Spread the love