ಅರ್ಹತೆಗೆ ತಕ್ಕಂತೆ ಸಿಗದೆ ಉದ್ಯೋಗ ಯುವತಿ ಆತ್ಮಹತ್ಯೆ – ಯುವ ಕಾಂಗ್ರೆಸ್‌ ಪ್ರತಿಭಟನೆಗೆ ಕರೆ

Spread the love

ಅರ್ಹತೆಗೆ ತಕ್ಕಂತೆ ಸಿಗದೆ ಉದ್ಯೋಗ ಯುವತಿ ಆತ್ಮಹತ್ಯೆ – ಯುವ ಕಾಂಗ್ರೆಸ್‌ ಪ್ರತಿಭಟನೆಗೆ ಕರೆ

ಉಡುಪಿ: ಅರ್ಹತೆಗೆ ತಕ್ಕ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮೃತ ಯುವತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಹನಾ (23) ಎಂದು ಗುರುತಿಸಲಾಗಿದೆ. ಈಕೆ ಕಾಫು ತಾಲೂಕಿನ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದಿದ್ದ ಸಹನಾ ವಿಷ ಸೇವನೆ ಮಾಡಿದ್ದು ಅಸ್ವಸ್ಥಗೊಂಡಿದ್ದ ಸಹನಾಳನ್ನು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಸಹನಾ ವಿಷ ಸೇವನೆ ಮಾಡಿದ್ದು, ಒಂದು ವರ್ಷದ ಹಿಂದೆ ಮಂಗಳೂರಿನಲ್ಲಿ ಎಂಬಿಎ ಮಾಡಿದ್ದ ಸಹನಾ, ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಕೆಲಸ ಸಿಗದ್ದರಿಂದ ಮನನೊಂದು ವಿಷ ಸೇವಿಸಿದ್ದಳು. ಮಿಷನ್‌ ಆಸ್ಪತ್ರೆ, ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಯ ಸೇರಿದಂಥೆ ಮೂರು ಆಸ್ಪತ್ರೆಗಳಲ್ಲಿ 10 ದಿನ ಸಹನಾಗೆ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು.

ಘಟನೆಯ ಕುರಿತು ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಹನಾ ಸಾವಿನ ಬೆನ್ನಲ್ಲೇ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಸಲು ಮುಂದಾಗಿದ್ದು ಗುರುವಾರ ಮಧ್ಯಾಹ್ನ ಉಡುಪಿಯಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ನಲಪಾಡ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.


Spread the love