ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ -ಅರ್ಜಿ ಸಲ್ಲಿಕೆ ಅವಧಿ ಡಿಸೆಂಬರ್ 30 ರ ವರೆಗೆ ವಿಸ್ತರಣೆ

Spread the love

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ -ಅರ್ಜಿ ಸಲ್ಲಿಕೆ ಅವಧಿ ಡಿಸೆಂಬರ್ 30 ರ ವರೆಗೆ ವಿಸ್ತರಣೆ

ಉಡುಪಿ: ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ ತಾಲೂಕುಗಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ದೂ.ಸಂಖ್ಯೆ: 0820-2574596, ದೂ.ಸಂಖ್ಯೆ: 08254-230370, ದೂ.ಸಂಖ್ಯೆ: 08258-231101 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.


Spread the love