ಅವಿರತ ಪ್ರಯತ್ನದಿಂದ ಮುಂದಿನ ಬಜೆಟ್ ನಲ್ಲಿ ಬಂಟ ಅಭಿವೃದ್ದಿ ನಿಗಮ ಘೋಷಣೆ – ಮಂಜುನಾಥ ಭಂಡಾರಿ
ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ವಿಶೇಷವಾಗಿ ಬಂಟರ ಅಭಿವೃದ್ದಿ ನಿಗಮವನ್ನು ಸ್ಥಾಪಿಸುವುದಾಗಿ ಹೇಳಿತ್ತು . ಈ ಹಿನ್ನಲೆಯಲ್ಲಿ ಇಂದು ವಿಶ್ವ ಬಂಟರ ಸಮ್ಮೆಳನದಲ್ಲಿ ಪಾಲ್ಗೊಂಡ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಣಟರ ಅಭಿವೃದ್ದಿ ನಿಗಮವನ್ನು ಘೋಷಿಸಿದ್ದು ನಮ್ಮ ಸರಕಾರ ನುಡಿದಂತೆ ನಡೆಯುವ ಸರಕಾರವೆಂದು ಹೆಳಲು ಬಹಳ ಹೆಮ್ಮೆಯಿದೆ ಎಂದು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ತಾನು ಅಕ್ಟೋಬರ್ 26ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ವಿಶ್ವ ಬಂಟರ ಸಮ್ಮೇಳನದಲ್ಲಿ ಬಂಟರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಕುರಿತು ಘೋಷಣೆ ಮಾಡುವಂತೆ ಕೋರಿಕೊಂಡಿದ್ದು ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಕಾರ್ಯಕ್ರಮದಲ್ಲಿ ಘೋಷಣೆಯನ್ನು ಮಾಡಿದ್ದಾರೆ.
ಬಂಟರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಅದಕ್ಕೆ ಪ್ರತಿ ವರ್ಷ ರೂ 250 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು













