ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Spread the love

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಮಧ್ಯಾಹ್ನದ ವೇಳೆಗೆ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್​​ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.


Spread the love