ಅ. 1 ರಂದು ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Spread the love

ಅ. 1 ರಂದು ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ. ಇದರ ಆಶ್ರಯದಲ್ಲಿ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನೆ ಮತ್ತು ಬ್ಯಾಂಕಿನ ವತಿಯಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾಗಿ ದ್ವಿತೀಯ ಬಾರಿಗೆ ಅವಿರೋಧವಾಗಿ ನೇಮಕಗೊಂಡ ಸಹಕಾರ ರತ್ನ ಡಾ| ಎಂ. ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ ಅಕ್ಟೋಬರ್ 1 ಶನಿವಾರ ಬೆಳಿಗ್ಗೆ 10.00 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಸಮಾರಂಭವನ್ನು ಭಾರತ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಎ. ಸುವರ್ಣ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಗೌರವ ಸಲಹೆಗಾರರಾದ ನಾಡೋಜ ಡಾ| ಜಿ. ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಂiÀiನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಸಿದ್ದಾರೆ.


Spread the love