ಅ. 11: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕನ್ನಡಕ ವಿತರಣಾ ಸಮಾರಂಭ

Spread the love

ಅ. 11: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕನ್ನಡಕ ವಿತರಣಾ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ. ಉಡುಪಿ ಜಿಲ್ಲೆಇದರ ವತಿಯಿಂದ ನರೇಂದ್ರ ಮೋದಿಯವರ 70 ನೇ ಜನ್ಮ ದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 19 ರಂದು ನಡೆದಂತಹ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಇದೇ ಬರುವ ಅಕ್ಟೋಬರ್ 11(ಆದಿತ್ಯವಾರ) ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕನ್ನಡಕ ವಿತರಣಾ ಕಾರ್ಯಕ್ರಮವು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆ ಯವರು ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಕ ವಿತರಣೆಯನ್ನು ಮಾಡಲಿದ್ದಾರೆ.

ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಸಿದ್ದ ಕಣ್ಣಿನ ತಜ್ಞ ವೈದ್ಯರಾದ ಡಾ. ಕೃಷ್ಣಪ್ರಸಾದ್ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಮಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love