ಅ.14: ಪಾಂಡೇಶ್ವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Spread the love

ಅ.14: ಪಾಂಡೇಶ್ವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಬ್ರಹ್ಮಾವರ: ಮೂರನೇ ಪಾಂಡೇಶ್ವರ ಗ್ರಾಮ ಪಂಚಾಯತ್ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅಗಸ್ಟ್ 14 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಜರುಗಲಿದೆ.

ನೂತನ ಕಟ್ಟಡವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೆರವೇರಿಸಲಿದ್ದು, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ ಖರ್ಗೆ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಎಲ್ ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಪಂಚಾಯತ್ ಅಧ್ಯಕ್ಷರಾದ ಕಲ್ಪನಾ ದಿನಕರ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಮ್ ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್ ವಿ ಇಬ್ರಾಹಿಂಪುರ್ ಭಾಗವಹಿಸಲಿದ್ದಾರೆ. ಗೀತಾನಂದ ಫೌಂಡೇಶನ್ ಕೋಟ ಇದರ ಪ್ರವರ್ತಕರಾದ ಆನಂದ ಸಿ ಕುಂದರ್ ಗೌರವ ಉಪಸ್ಥಿತಿ ಹೊಂದಲಿದ್ದಾರೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.


Spread the love