ಅ.2: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ 31,679 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

Spread the love

ಅ.2: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ 31,679 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಉಡುಪಿ: ನಮ್ಮ ದುಡಿಮಯ ಒಂದು ಭಾಗವನ್ನು ಸಾಮಾಜಿಕ ಮೌಬದ ಕಾರ್ಯಕ್ರಮಗಳಿಗೆ ನೀಡಬೇಕು ಎನ್ನುವ ಉದ್ದೇಶಭದ ಜ್ಞಾಪಿಸಲಾದ ಹೆಗ್ಗುಂಜೆ ರಾಜೀವ ಶೆಟ್ಟಿ, ಬಾಂಟಲ್ ಸಿಟಿ (0), ಬೆಂಗಳೂರು ಇದರ ಮೂಲಕ ಕಳೆದ ಕೆಲ ವರ್ಷಗಳಿಂದ ಸಲ್ಲಿಸಲಾಗುತ್ತಿದ್ದು ಅಕ್ಟೋಬರ್ 2 ರಂದು ಜಿಲ್ಲೆಯ 350 ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತವಾಗಿ 31679 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಉಪಾಧ್ಯಕ್ಷರಾದ ಹೆಚ್ ನಾಗರಾಜ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೊಸೈಟಿಯ ಅಧ್ಯಕ್ಷರಾಗಿ ಹೆಚ್ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಹೆಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯ ನಿರ್ವಾಹಕ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. 2006 ರಿಂದ ಹಾಲಾಡಿ ಹಾಗೂ ಪರಿಸರದ ಆಯ್ಕೆ ಶಾಲೆಗಳ ಮಕ್ಕಳಿಗೆ ನಿರಂತರವಾಗಿ ವಿದ್ಯಾರ್ಥಿ ವೇತನ ನೀಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಾಯ ಹಸ್ತ ನೀಡಲಾಗುತ್ತಿದೆ. ಹೆಗ್ಗುಂಜೆ ರಾಜೀವ್‌ ಶೆಟ್ಟಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ನೆರವು ನೀಡಲಾಗಿದೆ. ಕುಂದಾಪುರ ಕಾಲೇಜಿನ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡುವುದಕ್ಕಾಗಿ ಪ್ರತಿ ವರ್ಷ 10 ಲಕ್ಷ ರೂ. ಗಳ ನೆರವನ್ನು ಸೊಸೈಟಿ ವತಿಯಿಂದ ನೀಡಲಾಗುತ್ತಿದೆ. ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಹಲವು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಆರ್ಥಿಕ ನೆರವನ್ನು ನೀಡಲಾಗಿದೆ. ಉಡುಪಿ ತಾಲ್ಲೂಕಿನ ನಿಟ್ಟೂರಿನ ನಿಟ್ಟೂರು ಎಜುಕೇಶನ್ ಆಧೀನದ ನಿಟ್ಟೂರು ಅನುದಾನಿತ ಪ್ರೌಢ ಶಾಲೆಯ ಅಭಿವ್ರುದ್ಧಿಗಾಗಿ 1 ಕೋಟಿ ರೂ ನೆರವನ್ನು ನೀಡಲಾಗಿದೆ. ಬ್ರಹ್ಮಾವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ 2 ಕೋಟಿ ರೂ. ನೆರವಿನ ಘೋಷಣೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಶಂಕು ಸ್ಥಾಪನೆ ನಡೆಯಲಿದೆ ಎಂದರು.

ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುವ ನಮ್ಮ ಈ ಭಾಗದ ಸಾಂಸ್ಕೃತಿಕ ರಾಯಭಾರಿಗಳಾದ ಯಕ್ಷಗಾನ ಕಲಾವಿದರಿಗೆ ನೆರವಿನ ಆಸರೆ ನೀಡುವ ಉದ್ದೇಶದಿಂದ 5 ಕಲಾವಿದರಿಗೆ ಸೊಸೈಟಿ ವತಿಯಿಂದ ಮನೆಗಳನ್ನು ಕಟ್ಟಿಸಿ ಕೊಡಲಾಗಿದೆ. ಅನೇಕ ಯಕ್ಷಗಾನ ಕಲಾವಿದರಿಗೆ ವಯಕ್ತಿಕ ನೆರವನ್ನು ನೀಡಲಾಗಿದೆ. ಬಡವರ ವೈದ್ಯಕೀಯ ವೆಚ್ಚದ ನಿರ್ವಹಣೆಗಾಗಿಯೂ ಸೊಸೈಟಿಯ ವತಿಯಿಂದ ಸಹಾಯಧನ ನೀಡಲಾಗಿದೆ. ಜಗತ್ತನ್ನೇ ಕಾಡಿದ ಕರೋನಾ ಕಾಲ ಘಟದಲ್ಲಿ ಅವಶ್ಯಕ ಚಿಕಿತ್ಸೆಗಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ವೆಂಟಿಲೇಟರ್, ಇತರ ವೈದ್ಯಕೀಯ ಪರಿಕರ, ಆಹಾರದ ಕಿಟ್, ಬೆಡ್ ಶೀಟ್ ಹಾಗೂ ಔಷಧಿ ವೆಚ್ಚಗಳಿಗೆ ನೆರವನ್ನು ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲದೆ ರಾಜ್ಯದ ಇತರ ಭಾಗಗಳಲ್ಲಿಯೂ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಸೊಸೈಟಿ ವತಿಯಿಂದ ನೆರವನ್ನು ನೀಡಲಾಗಿದೆ. ಉಡುಪಿ ಜಿಲ್ಲೆಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಒಟ್ಟು 360 ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆ, ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 31,679 ವಿದ್ಯಾರ್ಥಿಗಳಿಗೆ ಹಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ), ಬೆಂಗಳೂರು ಇದರ ವತಿಯಿಂದ ಉಚಿತ ಸಮವಸ್ತ್ರವನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅ.2 ರ.ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಅಮೃತ್ ಗಾರ್ಡ್‌ ನ್ ನಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ರಾಜ್ಯ ಇಂಧನ ಸಚಿವ ಸುನೀಲ್‌ ಕುಮಾರ ಉದ್ಘಾಟನೆ ಮಾಡಲಿದ್ದಾರೆ. ಉಡುಪಿ ಶಾಸಕ ಕೆ. ರಘುವತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್ ಮಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ನಟ,ನಿರೂಪಕ ರಮೇಶ್ ಅರವಿಂದ್, ಪಾಂಡಿಚೆರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ ಹಾಲಾಡಿ ಪ್ರತಾಪ್‌ ಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಕೆ.ಶಿವರಾಜ್‌ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಸಹ ಭೋಜನ ವ್ಯವಸ, ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇನ್ನೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ನಮ್ಮ ಸೊಸೈಟಿಯ ಅಧ್ಯಕ್ಷರಾದ ಹೆಚ್.ಎಸ್.ಶೆಟ್ಟಿ ಅವರ ಅಪೇಕ್ಷೆಯಂತೆ ಅಂದಾಜು 1.75 ಕೋಟಿ ರೂ. ವೆಚ್ಚದಲ್ಲಿ ಉಚಿತ ಸಮವಸ್ತ್ರ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಯಾಣ ವೆಚ್ಚವನ್ನು ಸೊಸೈಟಿಯಿಂದಲೇ ಭರಿಸಲಾಗುತ್ತಿದೆ. ಐತಿಹಾಸಿಕವಾದ ಈ ಕಾರ್ಯಕ್ರಮದಲ್ಲಿ ಆಹ್ವಾನಿತ ಗಣ್ಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ರಾಜೀವ್ ಶೆಟ್ಟಿ, ಕ್ರಷ್ಣ ಪೂಜಾರಿ, ನಿಧಿ ಎಸ್ ಹೆಗ್ಡೆ ಉಪಸ್ಥಿತರಿದ್ದರು.


Spread the love