ಅ.25 : ಕೆಥೊಲಿಕ್ ಸಭಾ ವಾರ್ಷಿಕ ಮಹಾಸಭೆ, ದಾಂತಿ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love

ಅ.25 : ಕೆಥೊಲಿಕ್ ಸಭಾ ವಾರ್ಷಿಕ ಮಹಾಸಭೆ, ದಾಂತಿ ಸಾಹಿತ್ಯ ಪ್ರಶಸ್ತಿ ಪ್ರದಾನ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪ್ರಶಸ್ತಿ ಮತ್ತು ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯ ಪುರಸ್ಕಾರ ಪ್ರದಾನ ಸಮಾರಂಭ ಅಕ್ಟೋಬರ್ 25 ರಂದು ಭಾನುವಾರ ಮಧ್ಯಾಹ್ಹ 3 ಗಂಟೆಗೆ ಉಡುಪಿ ಶೋಕ ಮಾತಾ ಇಗರ್ಜಿಯ ಸಭಾಂಗಣದಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನೂತನ ಅಧ್ಯಕ್ಷರಾದ ರೋಬರ್ಟ್ ಮಿನೇಜಸ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವಾ ಅತ್ತೂರು ಭಾಗವಹಿಸಲಿದ್ದು, ಕೆಥೊಲಿಕ್ ಸಭಾ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಕಾರ್ಯದರ್ಶಿ ಸಂತೋಷ್ ಕರ್ನೆಲಿಯೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love