ಅ.25 : ವಿದ್ಯಾರ್ಥಿಗಳಿಗೆ “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ :ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಅಕ್ಟೋಬರ್ 25 ಶನಿವಾರ ಬೆಳಿಗ್ಗೆ 9.30ಕ್ಕೆ ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರಬಂಧ ಸ್ಪರ್ಧೆಯನ್ನು ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಡಾ. ಧನಂಜಯ ಸರ್ಜಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಎಸ್. ಪ್ರಕಾಶ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಭಾಗವಹಿಸಲಿದ್ದಾರೆ.
ದೇಶ ಕಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಭವಿಷ್ಯದ ಆತ್ಮನಿರ್ಭರ ಭಾರತ ನಿರ್ಮಾಣದ ರೂವಾರಿಗಳಾದ ವಿದ್ಯಾರ್ಥಿಗಳ ದೃಷ್ಟಿಯಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ, ಕಾರ್ಯ ಯೋಜನೆ , ಬದ್ಧತೆ ಹಾಗೂ ವಿಕಸಿತ ಭಾರತ ಕಲ್ಪನೆಯ ಬಗ್ಗೆ “ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ” “Modi in My Eyes : a Visionary” ಎಂಬ ವಿಷಯದ ಬಗ್ಗೆ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜನೆ ಮಾಡಲಾಗಿದ್ದು ಪ್ರಾಥಮಿಕ ವಿಭಾಗ (5-7 ತರಗತಿ), ಪ್ರೌಢಶಾಲಾ ವಿಭಾಗ ( 8-10), ಪಿಯುಸಿ ವಿಭಾಗ, ಪದವಿ ವಿಭಾಗ, ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನದೊಂದಿಗೆ, ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ವಿಜೇತರಿಗೆ ಬ್ಯಾಂಕಿನ ವತಿಯಿಂದ ಕಲ್ಪಿಸಲಾಗುವುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972120332 ಸಂಪರ್ಕಿಸ ಬಹುದು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವೆಬ್ ಸೈಟ್ www.mahalakshmicoopbank.com ನಲ್ಲಿ ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













