ಅ.3ರಿಂದ ಶಿರಾಡಿ ಘಾಟ್ ಮೂಲಕ ಬಸ್ ಸಂಚಾರಕ್ಕೆಅವಕಾಶ: ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌

Spread the love

ಅ.3ರಿಂದ ಶಿರಾಡಿ ಘಾಟ್ ಮೂಲಕ ಬಸ್ ಸಂಚಾರಕ್ಕೆಅವಕಾಶ: ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌

ಮಂಗಳೂರು: ಶಿರಾಡಿ ಘಾಟ್ ಮೂಲಕ ಬಸ್ ಸಹಿತ ಎಲ್ಲ ಪ್ರಯಾಣಿಕರ ವಾಹನ ಸಂಚಾರಕ್ಕೆ ಅ.3ರಿಂದ ಅನುಮತಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ವರದಿ ಆಧರಿಸಿ ಸರಕಾರಿ ಹಾಗೂ ಖಾಸಗಿ ಬಸ್‌ಗಳಿಗೆ ಅನುಮತಿ ನೀಡಲಾಗಿದೆ. ಆದರೆ ಸದ್ಯಕ್ಕೆ ಯಾವುದೇ ರೀತಿಯ ಗೂಡ್ಸ್ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಇಲ್ಲ. ಶಿರಾಡಿ ಘಾಟ್‌ನಲ್ಲಿ ಕುಸಿತಗೊಂಡ 12 ಕಡೆಯ ಪೈಕಿ 8 ಕಡೆ ಅಪಾಯವಿಲ್ಲ. ಅಪಾಯ ಸಾಧ್ಯತೆ ಇರುವ 4 ಕಡೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮುಂದೆ ಇಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ನಡೆದ ಬಳಿಕ ತಜ್ಞರ ವರದಿ ಆಧರಿಸಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶಿರಾಡಿ ಘಾಟ್‌ನಲ್ಲಿ ಪೂರ್ಣ ಪ್ರಮಾಣದ ವಾಹನ ಸಂಚಾರ ಆರಂಭವಾದ ಬಳಿಕ ಚಾರ್ಮಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.


Spread the love