ಅ.4 ಕ್ಕೆ ಬಿ.ಅಪ್ಪಣ್ಣ ಹೆಗ್ಡೆ 90 ಜನ್ಮ ದಿನೋತ್ಸವ ಪೋಸ್ಟರ್ ಬಿಡುಗಡೆ

Spread the love

ಅ.4 ಕ್ಕೆ ಬಿ.ಅಪ್ಪಣ್ಣ ಹೆಗ್ಡೆ 90 ಜನ್ಮ ದಿನೋತ್ಸವ ಪೋಸ್ಟರ್ ಬಿಡುಗಡೆ

ಕುಂದಾಪುರ: ನಾಡಿನ ಹಿರಿಯ ಧಾರ್ಮಿಕ ಮುಖಂಡರು ಹಾಗೂ ಸಾಂಸ್ಕೃತಿಕ ಚಿಂತಕರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರಿಗೆ ಇದೇ ಡಿ.24 ಕ್ಕೆ 90 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಅವರ ಹುಟ್ಟು ಹಬ್ಬವನ್ನು ಸಾರ್ವಜನಿಕ ಭಾಗೀದಾರಿಕೆಯೊಂದಿಗೆ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ದಿಸೆಯಲ್ಲಿ ಕಾರ್ಯಕ್ರಮ ರೂಪಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ಹುಟ್ಟು ಹಬ್ಬದಾಚರಣೆ ಸಮಿತಿಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಅ.4 ರಂದು ಸಂಜೆ 4.30 ಕ್ಕೆ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆ 90 ರ ಜನ್ಮ ದಿನೋತ್ಸವ ಕಾರ್ಯಕ್ರಮದ ಮೊದಲ ಪೋಸ್ಟರ್ ಬಿಡುಗಡೆ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದ ಹಿಂದಿನ ಆಡಳಿತ ಧರ್ಮದರ್ಶಿ ಶ್ರೀ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಇತರ ಆಮಂತ್ರಿತ ಅತಿಥಿಗಳು ಭಾಗವಹಿಸಲಿದ್ದಾರೆ. ಅಪ್ಪಣ್ಣ ಹೆಗ್ಡೆ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments