ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪ; ವಿಎಚ್‌ಪಿ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಆಧರಿಸಿ ವಿ ಹೆಚ್ ಪಿ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶರಣ್ ಪಂಪ್ವೆಲ್ ಪೋಸ್ಟ್ ಅನ್ನು ಅಳಿಸಿಹಾಕಿದ್ದಾರೆ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆದಿದ್ದು ಸೋಮವಾರ ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಶರಣ್ ಪಂಪ್ವೆಲ್ ನೀಡಿದ ಬಾಂಡ್ ಬಗ್ಗೆಯೂ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಕಾಸ್ ಎಂಬಾತ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ಅನ್ನು ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿತ್ತು.
