ಆಗಸ್ಟ್ 29: ರಾಷ್ಟ್ರೀಯ ಹೆದ್ದಾರಿ ಭೂ ಸಂತ್ರಸ್ತರ ಕುಂದುಕೊರತೆ ಸಭೆ

Spread the love

ಆಗಸ್ಟ್ 29: ರಾಷ್ಟ್ರೀಯ ಹೆದ್ದಾರಿ ಭೂ ಸಂತ್ರಸ್ತರ ಕುಂದುಕೊರತೆ ಸಭೆ

ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66(17) ಅಗಲೀಕರಣಕ್ಕಾಗಿ ಭೂಸ್ವಾಧೀೀನಗೊಳ್ಳುತ್ತಿರುವ ಜಮೀನುಗಳ ಭೂ ಸಂತ್ರಸ್ತರಿಗೆ ಪರಿಹಾರ ಹಣ ಪಾವತಿಸುವಲ್ಲಿ ವಿಳಂಬ ಆಗುತ್ತಿರುವುದಾಗಿ ಅನೇಕ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಲು ಭೂ ಸಂತ್ರಸ್ತರ ಕುಂದುಕೊರತೆಗಳ ಸಭೆಯನ್ನು ಆಗಸ್ಟ್ 29 ರಂದು ಬೆಳಗ್ಗೆ 11 ಕ್ಕೆ ಬೈಂದೂರು ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.

ಈ ಸಭೆಗೆ ಭೂ ಸಂತ್ರಸ್ತರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ, ಪ್ರಿಯಾಂಕ ಮೇರಿ ಪ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love