ಆಗಸ್ಟ್ 9ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟ

Spread the love

ಆಗಸ್ಟ್ 9ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಜುಲೈ-2021ರಲ್ಲಿ ನಡೆದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಆ.9(ಸೋಮವಾರ)ರಂದು ಪ್ರಕಟ ಪಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಆ.9ರಂದು ಮಧ್ಯಾಹ್ನ 3.30ಕ್ಕೆ ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಕೋವಿಡ್ ಭೀತಿಯ ನಡುವೆಯು 8.72ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಸಲ ಅವರೆಲ್ಲರೂ ಉತ್ತೀರ್ಣರಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಜ್ಞರ ಜತೆ ಚರ್ಚಿಸಿ ಸಮಾಜ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವುದು. ಈ ಸಂಬಂಧ ನಾಳೆ(ರವಿವಾರ) ಶಿಕ್ಷಣ ತಜ್ಞರ ಜತೆ ಸಭೆ ನಡೆಸಿ ಮುಖ್ಯಮಂತ್ರಿಗಳ ಸಲಹೆ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈಗ ಮಕ್ಕಳಿಗೆ ಆನ್ ಲೈನ್ ಮೂಲಕ ತರಗತಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಈ ಕೆಳಕಂಡ ವೆಬ್ ಸೈಟ್‍ಗಳಲ್ಲಿ ತಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದು: sslc.karnataka.gov.in, kseeb.kar.nic.in or karresults.nic.in.


Spread the love