ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣ – ಶಿವಮೊಗ್ಗದಲ್ಲಿ ಶಾರಿಕ್ ಮನೆಯಲ್ಲಿ ಪೊಲೀಸರ ತಪಾಸಣೆ

Spread the love

ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣ – ಶಿವಮೊಗ್ಗದಲ್ಲಿ ಶಾರಿಕ್ ಮನೆಯಲ್ಲಿ ಪೊಲೀಸರ ತಪಾಸಣೆ

ಶಿವಮೊಗ್ಗ: ಮಂಗಳೂರಿನಲ್ಲಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ಹಿನ್ನಲೆಯಲ್ಲಿ ಮಂಗಳೂರು ಗೋಡೆ ಬರಹ ಪ್ರಕರಣದ ಆರೋಪಿ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.

ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಶಾರೀಕ್ ಮನೆ ಸೇರಿದಂತೆ ಅವರ ಸಂಬಂಧಿಕರ ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

Leave a Reply

Please enter your comment!
Please enter your name here