
Spread the love
ಆಡಳಿತಕ್ಕೆ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಬಿ.ದಯಾನಂದ ನೇಮಕ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.
ಗುಪ್ತಚರ ಇಲಾಖೆ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ. ದಯಾನಂದ ಅವರನ್ನು ಎತ್ತಂಗಡಿ ಮಾಡಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.
ಕ್ರಿಮಿನಲ್ ತನಿಖೆ ವಿಭಾಗದ ಎಡಿಜಿಪಿ ಆಗಿದ್ದ ಶರತ್ ಚಂದ್ರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
Spread the love