Home Mangalorean News Kannada News ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ 

ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ 

Spread the love

ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ 

ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆದಿಉಡುಪಿ ಹೆಲಿಪ್ಯಾಡ್ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದಿ ಉಡುಪಿಯಲ್ಲಿ ಪ್ರಸ್ತುತ ಇರುವ 3 ಹೆಲಿಪ್ಯಾಡ್ ಗಳನ್ನು ನವೀಕರಿಸುವ ಜೊತೆಗೆ ಹೆಚ್ಚುವರಿಯಾಗಿ ಒಂದು ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಡಳಿತ ನಿರ್ಧರಿಸಿದ್ದು , ತಕ್ಷಣ ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ಮಾಣ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಉಡುಪಿ ನಗರಸಭೆ ವತಿಯಿಂದ ಹೆಲಿಪ್ಯಾಡ್ ಪ್ರದೇಶದಲ್ಲಿ ಹುಲ್ಲುಗಳನ್ನು ತೆರವುಗೊಳಿಸಿ,ಸ್ವಚ್ಚತೆ ಕಾರ್ಯಗಳು ನಡೆಯುತ್ತಿದೆ., ಹೆಲಿಪ್ಯಾಡ್ ಸಂಪರ್ಕಿಸುವ ರಸ್ತೆಗಳ ರಿಪೇರಿಗೆ ಕ್ರಮ ವಹಿಸಲಾಗಿದ್ದು, ಹೆಲಿಪ್ಯಾಡ್ ಪ್ರದೇಶಕ್ಕೆ ಶೀಘ್ರದಲ್ಲಿ ಸುಸಜ್ಜಿತ ಗೇಟ್ ಅಳವಡಿಕೆ ಹಾಗೂ ಆವರಣ ಗೋಡೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಆದಿ ಉಡುಪಿ ಕರಾವಳಿ ಜಂಕ್ಷನ್ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ವಿಶೇಷ ಆದ್ಯತೆ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಇಂಜಿನಿಯರ್ ರವರಿಗೆ ಹೇಳಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀ ಸುಂದರ ಕಲ್ಮಾಡಿ, ಶ್ರೀಶ ಭಟ್, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಬೈಲೂರು, ಪ್ರಮುಖರಾದ ಶ್ರೀ ಹರೀಶ್ ರಾಮ್, ಶ್ರೀ ದಿನೇಶ್ ಅಮೀನ್, ಶ್ರೀ ಅಕ್ಷಿತ್ ಶೆಟ್ಟಿ ಹೆರ್ಗ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಶ್ರೀ ಲಾಯ್ಡ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಹಾಯಕ ಇಂಜಿನಿಯರ್ ಶ್ರೀ ಮಂಜುನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version