ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ಕೊರೋನಾ ಪಾಸಿಟಿವ್‌

Spread the love

ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ಕೊರೋನಾ ಪಾಸಿಟಿವ್‌

ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ಕೊರೋನಾ ಪಾಸಿಟಿವ್‌ ಕಾಣಿಸಕೊಂಡಿದ್ದು ಹೋಮ್‌ ಐಸೋಲೇಶನ್‌ ಆಗಿದ್ದಾರೆ.

ಬುಧವಾರವಷ್ಠೆ ವಿದೇಶದಿಂದ ವಾಪಾಸಾಗಿದ್ದ ಆರೋಗ್ಯ ಸಚಿವರು ಕೋವಿಡ್‌ ಟೆಸ್ಟ್‌ ಗೆ ಒಳಗಾಗಿದ್ದು ಅದರಂತೆ ಬಂದ ವರದಿಯಲ್ಲಿ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುಧಾಕರ್‌ ” ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್‌ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್‌ ಟೆಸ್ಟ್‌ ಮಾಡಿಸಿದಾಗ ಪಾಸಿಟಿವ್‌ ಆಗಿರುವುದು ಪತ್ತೆಯಾಗಿದೆ ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್‌ ಐಸೋಲೇಷನ್‌ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್‌ ತಪಾಸಣೆಗೆ ಒಳಗಾಗ ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.


Spread the love