ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ

Spread the love

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ

ಉಡುಪಿ : ಕೊರೋನಾ ಮಹಾಮಾರಿಯಿಂದ ಇಡೀ ದೇಶವೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಂದಿಗ್ಧ ಸಂದರ್ಭದಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಮೂಲ ಸೌಕರ್ಯಗಳು ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೂತನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಜೊತೆಗೆ ಆರೋಗ್ಯ ಕ್ಷೇತ್ರದ ಅಭಿವೃಧ್ಧಿ ಹಾಗೂ ಆತ್ಮನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಸಮೃಧ್ದ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಕುಯಿಲಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love