ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರದು – ನಳಿನ್ ಕುಮಾರ್ ಕಟೀಲ್

Spread the love

ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರದು – ನಳಿನ್ ಕುಮಾರ್ ಕಟೀಲ್

ಮಂಗಳೂರು: ಆರ್‌ಎಸ್‌ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶವಾಗುವುದು ಖಂಡಿತ. ಜವಾಹರ್‌ ಲಾಲ್‌ ನೆಹರು, ಇಂದಿರಾ ಗಾಂಧಿ ಎಲ್ಲರೂ ಆರ್‌ಎಸ್‌ಎಸ್‌ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗೆ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್‌ಎಸ್ಎಸ್ ಸ್ವಯಂ ಸೇವಕರು. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್‌ಎಸ್‌ಎಸ್ ಸ್ವಯಂ ಸೇವಕರು ಎಂದರು.

ಜವಾಹರ್‌ ಲಾಲ್‌ ನೆಹರು, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ. ಭಜರಂಗದಳ, ಆರ್‌ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಹೇಳಿದರು.

ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಮೊದಲು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಲಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಕಿಡಿಕಾರಿದರು.

ಇದು 80% ಪರ್ಸೆಂಟ್​ ಪಡೆಯುವ ಸರ್ಕಾರ. ನಮ್ಮ ವಿರುದ್ಧ ಕಾಂಗ್ರೆಸ್​​ನವರು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ತನಿಖೆ ನಡೆಸಲಿ. ಹಿಂದಿನ ಎಲ್ಲ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ.


Spread the love

Leave a Reply

Please enter your comment!
Please enter your name here