ಆಳ್ವಾಸ್‍ನಲ್ಲಿ ದೇಶಭಕ್ತಿಯ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸರ್ವರ ಭಾರತವೇ ಸಮೃದ್ಧ ದೇಶ: ಆಳ್ವ

Spread the love

ಆಳ್ವಾಸ್‍ನಲ್ಲಿ ದೇಶಭಕ್ತಿಯ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸರ್ವರ ಭಾರತವೇ ಸಮೃದ್ಧ ದೇಶ: ಆಳ್ವ

ಮೂಡುಬಿದಿರೆ: ‘ಸುಸ್ಥಿರ, ಸಾಮರಸ್ಯ, ಸಮಾನತೆ, ಸರ್ವ ಜೀವಿಗಳ ನೆಲೆಯ ಭಾರತ ನಿರ್ಮಾಣವೇ ನಮ್ಮೆಲ್ಲರ ಗುರಿ’ ಎಂದು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

default

ಆಳ್ವಾಸ್ ಶಿಕ್ಷಣ ಪ್ರತಿμÁ್ಠನವು ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ 77ನೇ ಸ್ವಾತಂತ್ರ್ಯೋತ್ಸವ ಆಚರಣೆಯ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಅಂಚೆ, ರೈಲ್ವೆ, ತಂತ್ರಜ್ಞಾನಗಳ ಬೃಹತ್ ಜಾಲಗಳು, ಕಲ್ಲಿದಲ್ಲು, ವಿದ್ಯುತ್, ಧಾನ್ಯ, ಸೆಣಬು, ಗೋಧಿ, ಅಕ್ಕಿ, ಸಕ್ಕರೆ, ಸಾಂಬಾರು, ಹಾಲು, ಮತ್ಸ್ಯ, ಜವಳಿ ಉತ್ಪಾದನೆಗಳು, ಗುಡಿಕೈಗಾರಿಕೆ, ಶಿಲ್ಪಕಲೆ ಸೇರಿದಂತೆ ದೇಶವು ಹಲವು ಬಗೆಗಳಲ್ಲಿ ಮುಂಚೂಣಿಯಲ್ಲಿದೆ. ಜನಸಂಖ್ಯೆ, ಯುವಶಕ್ತಿಯಲ್ಲೂ ನಾವೇ ಮುಂದಿದ್ದೇವೆ ಎಂದರು.

‘ಆದರೆ, ತಿದ್ದಿಕೊಳ್ಳುವ, ಪರಿಷ್ಕರಿಸಿಕೊಳ್ಳುವ, ಆವಿಷ್ಕರಿಸುವ ಸಾಧನೆಗಳು ನಮ್ಮ ಮುಂದೆ ಸಾಕಷ್ಟಿವೆ. ಸಂತೋಷ ಭರಿತ, ಸಮೃದ್ಧ, ಸದೃಢ, ಸಂಪತ್ಭರಿತ ದೇಶವನ್ನು ನಾವೆಲ್ಲ ನಿರ್ಮಿಸಬೇಕಾಗಿದೆ’ ಎಂದು ನೆನಪಿಸಿದರು.

‘ಧರ್ಮ, ಮತ, ಜಾತಿ, ಭಾಷೆಗಳ ನಡುವೆ ಸಾಮರಸ್ಯ ನಿರ್ಮಿಸಿ, ವೈರುದ್ಧ್ಯ, ವೈಮನಸ್ಸು, ಅಸಮಾನತೆಗಳನ್ನು ಹೋಗಲಾಡಿಸಬೇಕು. ಏಕತೆ, ಸಂಪತ್ತಿನ ಸಮಾನ ಹಂಚಿಕೆ, ಲಿಂಗ ತಾರತಮ್ಯ ರಹಿತ, ಕ್ರೌರ್ಯ- ಬಹಿಷ್ಕಾರಗಳಿಲ್ಲದ ಸಮುದಾಯ ರೂಪಿಸಬೇಕು. ಪಾರದರ್ಶಕ ಆಡಳಿತದ ಹೊಣೆಗಾರಿಕೆ ನಮ್ಮ ಮುಂದಿದೆ’ ಎಂದು ವಿವರಿಸಿದರು.

‘ಭಾಷಾ ವೈವಿಧ್ಯತೆ, ಕಲೆ, ಕೌಶಲ, ಶ್ರಮಿಕರು, ಕೃಷಿಕರಿಗೆ ಆಶ್ರಯವಾಗುವ ಸಂಸ್ಥೆಗಳನ್ನು ರೂಪಿಸಬೇಕು. ಸರ್ವರ ಆರೋಗ್ಯ ಕಾಪಾಡಬಲ್ಲ ವೈದ್ಯಕೀಯ ವ್ಯವಸ್ಥೆ ಬೇಕಾಗಿದೆ’ ಎಂದು ಆಶಯ ವ್ಯಕ್ತಪಡಿಸಿದರು.

‘ಹೊರದೇಶದಲ್ಲಿ ಯುವಶಕ್ತಿ ಅವಶ್ಯವಾಗಿದೆ. ನಮ್ಮ ದೇಶದ ಯುವಶಕ್ತಿಯ ಮೇಲೆ ಇತರ ದೇಶಗಳ ಕಣ್ಣಿದೆ. ಅದಕ್ಕಾಗಿಯ ವಿದ್ಯಾಭ್ಯಾಸ, ಉದ್ಯೋಗ, ಐಷಾರಾಮಿ ಜೀವನದ ಮೂಲಕ ಗಿಲೀಟಿನ ಆಮಿಷ ನೀಡಿ ಸೆಳೆಯುತ್ತಿದ್ದಾರೆ. ಅದಕ್ಕೆ ಮರುಳಾಗಬೇಡಿ’ ಎಂದರು.

‘ಪ್ರಯತ್ನದಲ್ಲಿ ನಿರಂತರತೆ, ಸಚ್ಚಾರಿತ್ಯ, ನಿರ್ದಿಷ್ಟತೆ, ನೈಜ ದೇಶಪ್ರೇಮದಿಂದ ಯುವಜನತೆ ಗುರಿ ಸಾಧಿಸಬಹುದು. ಆಗ ದೇಶದ ಭವಿಷ್ಯ ಹಾಗೂ ಬಾಳು ಬಂಗಾರ ಆಗಲು ಸಾಧ್ಯ’ ಎಂದು ಬಣ್ಣಿಸಿದರು.

‘ಅಹಿಂಸೆ ಮೂಲಕ ಸರ್ವಜನರ ಒಗ್ಗೂಡಿಸಿದ, ಮನೋಶಕ್ತಿಯಿಂದ ಸ್ವಾತಂತ್ರ್ಯ ಪಡೆದ ದೇಶ ನಮ್ಮದು’ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಶುಭ್ರ ಶ್ವೇತಧಾರಿಯಾಗಿದ್ದ ಮುಗುಳ್ನಗೆಯ ಮೋಹನ ಆಳ್ವ ಅವರು, ತ್ರಿವರ್ಣ ಹೂಗಳಿಂದ ಸಿಂಗರಿಸಿದ ಧ್ವಜಸ್ಥಂಬದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದಾಗ ವಿದ್ಯಾರ್ಥಿ, ಬೋಧಕರು ಹಾಗೂ ಸಿಬ್ಬಂದಿ ಧ್ಜಜವಂದನೆ ಮಾಡಿದರು.

ಕೇಸರಿ, ಬಿಳಿ, ಹಸಿರು ತ್ರಿವರ್ಣ ರಂಗಿನ ಧಿರಿಸಿನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಧ್ವಜವನ್ನು ಅಲೆಯಂತೆ ಬೀಸುತ್ತಿದ್ದಾಗ, ದೇಶಭಕ್ತಿಯ ಅಭಿಮಾನದ ಸಾಗರವೇ ಉಕ್ಕಿಬಂತು.

ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ, ಆಡಳಿತ ಮಂಡಳಿಯ ಜಯಶ್ರೀ ಅಮರನಾಥ ಶೆಟ್ಟಿ, ಉದ್ಯಮಿ ಶ್ರೀಪತಿ ಭಟ್ ಹಾಗೂ ಇನ್ನಿತರ ಗಣ್ಯರು ಇದ್ದರು.

ಮಾಜಿ ಸೈನಿಕರು, ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಪದವಿ ಪೂರ್ವ ಕಾಲೇಜು ಸೇರಿದಂತೆ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸಂಭ್ರಮದಲ್ಲಿ ಪಾಲ್ಗೊಂಡರು.

ಆಳ್ವಾಸ್ ಸಾಂಸ್ಕøತಿಕ ತಂಡದ ಸದಸ್ಯರು ‘ಕೋಟಿ ಕಂಠೊಂಸೆ’, ‘ವಂದೇ ಮಾತರಂ’, ‘ಜನ ಗಣ ಮನ’ವನ್ನು ಸುಶ್ರಾವ್ಯವಾಗಿ ಹಾಡಿದರು. ಉಪನ್ಯಾಸಕರಾದ ವೇಣುಗೋಪಾಲ ಕೆ. ಶೆಟ್ಟಿ ಹಾಗೂ ಡಾ.ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಪರೇಡ್ ಕಮಾಂಡರ್ ಆಗಿ ಎನ್‍ಸಿಸಿ ಅಂಡರ್ ಆಫೀಸರ್ ಪುಷ್ಯ ಪೆÇನ್ನಮ್ಮ ಹಾಗೂ ಗೌರವ ವಂದನೆಯನ್ನು ಅಂಡರ್ ಆಫೀಸರ್‍ಗಳಾದÀ ವಿಕಾಸ್ ಗೌಡ ಮತ್ತು ಅಬ್ರಹಾರ್ ನೆರವೇರಿಸಿಕೊಟ್ಟರು.


Spread the love