ಆಳ್ವಾಸ್‍ನಲ್ಲಿ ಅರಿವು  ಕಾರ್ಯಕ್ರಮ

Spread the love

ಆಳ್ವಾಸ್‍ನಲ್ಲಿ ಅರಿವು  ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ದೂರು ನಿರ್ವಹಣಾ ಸಮಿತಿಯಿಂದ ‘’ಅರಿವು’’ ಕಾರ್ಯಕ್ರಮವನ್ನು ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಂಗಳೂರಿನ ಮನಃಶಾಂತಿ ಕೌನ್ಸಿಲಿಂಗ್ ಸೆಂಟರ್‍ನ ಡಾ. ರಮಿಲಾ ಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. “ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಅತ್ಯಗತ್ಯ. ಏನೇ ಸಮಸ್ಯೆಯಿದ್ದರೂ, ಯಾವುದೇ ಬಗೆಯ ಸವಾಲು ತೊಂದರೆಗಳಿದ್ದರೂ ವಿದ್ಯಾರ್ಥಿಗಳು ಅದನ್ನು ವ್ಯಕ್ತಪಡಿಸಬೇಕು. ಇಲ್ಲದ್ದಿದ್ದರೆ ಮುಂದೆ ಅದು ಮಾನಸಿಕವಾಗಿ ಮಾತ್ರವಲ್ಲದೆ ದೈಹಿಕವಾಗಿ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಸಮಸ್ಯೆಗಳಿದ್ದಾಗ ಯಾವುದೇ ಹಿಂಜರಿಕೆಯಿಲ್ಲದೆ ಸಂಬಂಧಪಟ್ಟವರಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಆಂತರಿಕ ದೂರು ನಿರ್ವಹಣಾ ಸಮಿತಿಗಳು ಈ ನಿಟ್ಟಿನಲ್ಲಿ ದೊಡ್ಡ ಸಹಾಯ ಮಾಡಬಲ್ಲದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಮಹಮ್ಮದ್ ಸದಕತ್ ” ವಿದ್ಯಾರ್ಥಿಗಳಿಗೆ ಬದುಕಿನ ಎಲ್ಲ ಬಗೆಯ ಅನುಭವಗಳಿರಬೇಕು. ನೋವು, ಸೋಲು, ಸವಾಲುಗಳನ್ನು ಎದುರಿಸಲು ಕಲಿತಾಗ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಆಂತರಿಕ ದೂರು ನಿರ್ವಹಣಾ ಸಮಿತಿಯು ವಿದ್ಯಾರ್ಥಿಗಳಿಗೆ ಎಲ್ಲ ಬಗೆಯ ಸಹಕಾರ ನೀಡಲು ಬದ್ಧವಾಗಿದೆ. ಏನೇ ಸಮಸ್ಯೆಗಳಿದ್ದರು ಅದನ್ನು ಮುಕ್ತವಾಗಿ ಹಂಚಿಕೊಳ್ಳುವ ಅವಕಾಶವನ್ನು ಈ ಸಮಿತಿ ಒದಗಿಸಲಿದೆ. ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪದವಿಪೂರ್ವ ಕಾಲೇಜಿನ ಇಂಗ್ಲೀμï ವಿಭಾಗದ ಮುಖ್ಯಸ್ಥೆ ಲಸ್ಸಿ ಸಜೆ ” ಹೆಣ್ಣುಮಕ್ಕಳು ತಮ್ಮ ರಕ್ಷಣೆಯ ಜವಾಬ್ದಾರಿಯನ್ನು ತಾವೇ ನಿರ್ವಹಿಸಬೇಕು. ಕಠಿಣ ಸನ್ನಿವೇಶಗಳು ಎದುರಾದಾಗ ಧೈರ್ಯವಾಗಿ ಅದನ್ನು ಎದುರಿಸಬೇಕು ಎಂದರು.

ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಸುಲತಾ ವಿಧ್ಯಾಧರ್ ಮಾತನಾಡಿ, ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ಸಮಾನತೆ ಅಗತ್ಯ. ಆಗ ಮಾತ್ರ ಆರೋಗ್ಯಪೂರ್ಣ ಸಮಾಜದ ನಿರ್ಮಾಣ ಸಾಧ್ಯ. ಹೆಣ್ಣುಮಕ್ಕಳು ತಮ್ಮ ಮೇಲೆ ಅನ್ಯಾಯವಾದಾಗ ಮೌನವನ್ನು ಮುರಿಯಬೇಕು. ಅದನ್ನು ಪ್ರತಿಭಟಿಸುವ ಧೈರ್ಯವನ್ನು ಪ್ರದರ್ಶಿಸಬೇಕು. ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಗಳನ್ನು ಬಳಸಿಕೊಳ್ಳಬೇಕು ಎಂದರು.

ಆಂತರಿಕ ದೂರು ನಿರ್ವಹಣಾ ಸಮಿತಿಯ ಸಂಯೋಜಕಿ ಉಮ ಬಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಮರಿಯಾ ಲಿನೆಟ್ ಲೋಬೋ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಮಮತಾ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ದಿವ್ಯಶ್ರೀ ಡೆಂಬಳ ಕಾರ್ಯಕ್ರಮವನ್ನು ನಿರೂಪಿಸಿದರು.


Spread the love