ಆಸ್ಕರ್ ಫೆರ್ನಾಂಡಿಸ್ ಹುಟ್ಟು ಹಬ್ಬ: ಅನಾಥಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Spread the love

ಆಸ್ಕರ್ ಫೆರ್ನಾಂಡಿಸ್ ಹುಟ್ಟು ಹಬ್ಬ: ಅನಾಥಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಕೇಂದ್ರ ಸಚಿವರು, ಅಜಾತಶತ್ರು ಆದ ದಿ. ಆಸ್ಕರ್ ಫೆರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸವಿನೆನಪಿಗಾಗಿ ಮಿಷನ್ ಕಾಂಪೌಂಡ್ನ ಸಿ.ಎಸ್.ಐ ಬಾಲಕರ ವಸತಿ ನಿಲಯದ ಅನಾಥಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಏ ಗಫೂರ್ ಅವರು ಮಾತನಾಡಿ ಆಸ್ಕರ್ ಫೆರ್ನಾಂಡಿಸ್ ಅವರು ನಡೆದು ಬಂದ ದಾರಿ, ಅವರ ಆದರ್ಶಗಳನ್ನು ವಿವರಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಸ್ಕರ್ ಫೆರ್ನಾಂಡಿಸ್ ಅವರ ಜನಸೇವೆ ಹಾಗೂ ಅವರ ಕೊಡುಗೆಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ, ರೋನಾಲ್ಡ್ ಮನೋಹರ್ ಕರ್ಕಡ, ಗಣೇಶ್ ನೆರ್ಗಿ, ಶರತ್ ಶೆಟ್ಟಿ, ಪುಂಡರೀಶ್ ಕುಂದರ್, ಚಾರ್ಲ್ಸ್ ಅಂಬ್ಲರ್, ಮೇಡಮ್ ಕ್ಲಾರಾ, ಸ್ಯಾಮ್ಯುಯೆಲ್, ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು


Spread the love