ಆ.21- ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುತ್ಲೂರು ಶಾಲೆಗೆ ವಿವಿಧ ಸೌಲಭ್ಯಗಳ ಕೊಡುಗೆ

ಆ.21- ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುತ್ಲೂರು ಶಾಲೆಗೆ ವಿವಿಧ ಸೌಲಭ್ಯಗಳ ಕೊಡುಗೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು ಇದರ ಉದ್ಘಾಟನಾ ಸಮಾರಂಭ ಆ.21ರಂದು ಬುಧವಾರ ನಡೆಯಲಿದೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕಳೆದ ವರ್ಷ ಡಿಸೆಂಬರ್ 23 ರಂದು ಕುತ್ಲೂರು ಶಾಲೆಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲೆಗೆ ವಿವಿಧ ಕೊಡುಗೆಯನ್ನು ನೀಡಲಾಗುತಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ.ಸೆಲ್ವ ಮಣಿ, ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕ ಸೈದುಲ್ಲಾ ಅದಾವತ್, ಪುತ್ತೂರು ಸಹಾಯಕ. ಕಮೀಷನರ್ ಹೆಚ್.ಕೆ‌‌.ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವರಾಮಯ್ಯ ,ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ದಕ್ಷಿಣ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್ .ಎನ್.ಪೂವಣಿ ,ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ದೇವಾಡಿಗ ,ಸಮಾಜ ಸೇವಕ ರಾಮಚಂದ್ರ ಭಟ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.